TSK

TSK · ಮಾರ್ಕನು 10:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮೋಶೆ ಅವನಿಗೆ, “ನಾವು ಯೆಹೋವನಿಗೆ ಜಾತ್ರೆಯನ್ನು ಆಚರಿಸಬೇಕಾಗಿದೆ. ಆದಕಾರಣ ಚಿಕ್ಕವರು ಮೊದಲುಗೊಂಡು, ಮುದುಕರವರೆಗೂ ಎಲ್ಲರೂ ಹೋಗುತ್ತೇವೆ; ಗಂಡು ಹೆಣ್ಣುಮಕ್ಕಳನ್ನೂ, ದನಕುರಿಗಳ ಮಂದೆಯನ್ನು ತೆಗೆದುಕೊಂಡು ಹೋಗುತ್ತೇವೆ” ಎಂದು ಉತ್ತರಕೊಟ್ಟನು.

ಜನರನ್ನು ಒಟ್ಟುಗೂಡಿಸಿರಿ, ಪವಿತ್ರ ಸಭೆಯನ್ನು ಏರ್ಪಡಿಸಿರಿ. ಹಿರಿಯರನ್ನು ಕೂಡಿಸಿರಿ, ಮಕ್ಕಳನ್ನು ಸೇರಿಸಿರಿ, ಮೊಲೆಕೂಸುಗಳನ್ನು ಸೇರಿಸಿರಿ. ಮದುಮಗನು ತನ್ನ ಕೊಠಡಿಯಿಂದ ಹೊರಟುಬರಲಿ, ವಧುವು ತನ್ನ ಕಲ್ಯಾಣಗೃಹದಿಂದ ಹೊರಟುಬರಲಿ.

¶ ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.

¶ ಕೆಲವರು ತಮ್ಮ ಕೂಸುಗಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು, ಶಿಷ್ಯರು ಕಂಡು ಅವರನ್ನು ಗದರಿಸಿದರು.