TSK

TSK · ಮಾರ್ಕನು 11:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನಿಗೆ ಸ್ತೋತ್ರ! ಆಕಾಶಮಂಡಲದಿಂದ ಯೆಹೋವನಿಗೆ ಸ್ತುತಿಯುಂಟಾಗಲಿ, ಮಹೋನ್ನತದಲ್ಲಿ ಆತನ ಸ್ತೋತ್ರವು ಕೇಳಿಸಲಿ.

ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಗಳನ್ನು ನಿರ್ವಹಿಸುವನು.

¶ “‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.

ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.

ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು.

“ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು.