TSK

TSK · ಮಾರ್ಕನು 11:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.

‹ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.›

ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, ‹“ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ”› ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.

‹ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು”› ಎಂದು ಹೇಳಿದನು.

‹ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.›

ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ. ಮೈಲಿಗೆಯಾಗಿರುವವನು ತನ್ನನ್ನು ಇನ್ನು ಮೈಲಿಗೆಯ ಮಾಡಿಕೊಳ್ಳಲಿ, ನೀತಿವಂತನು ಇನ್ನೂ ನೀತಿವಂತನಾಗಲಿ ಮತ್ತು ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ.”