TSK

TSK · ಮಾರ್ಕನು 11:32

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಯೆರೂಸಲೇಮಿನವರು, ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು,

ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.

ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.

¶ ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.

ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,

ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.

ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.