TSK

TSK · ಮಾರ್ಕನು 12:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.

ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.

ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು.

“ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?

ಆ ಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ, “ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ, ಅವರ ವಿಧಿಗಳನ್ನು ಕೈಕೊಳ್ಳದೆ, ಅವರ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳದೆ ಇರಬೇಕು.

¶ ತರುವಾಯ ಆತನ ಶಿಷ್ಯರು ಬಂದು, “ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ?” ಎಂದು ಕೇಳಿದರು.

‹ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು›

ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ:

¶ ಆತನು ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.

‹ಅದು›‹ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ”› ಎಂದು ನಾನು ನಿಮಗೆ ಹೇಳುತ್ತಿದ್ದೇನೆ.

¶ ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, ‹“ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.›

ಅದೇನೆಂದರೆ, ‹“ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು.›

ಅವರು, “ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ?” ಎಂದು ಆತನನ್ನು ಕೇಳಲು,

ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.

¶ ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಸುನ್ನತಿ ಮಾಡಿಸಿಕೊಂಡದರಿಂದ ಲಾಭವೇನು?

ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.