¶ “‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.
TSK
TSK · ಮಾರ್ಕನು 12:31
Treasury of Scripture Knowledge references in ಕನ್ನಡ IRV.
ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, ‹“ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು.›
ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.
¶ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.
“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ.
ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?
ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.