TSK

TSK · ಮಾರ್ಕನು 13:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.

ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.

¶ ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು, ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು.

¶ ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು.