TSK

TSK · ಮಾರ್ಕನು 13:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.

ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.

¶ ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.

‹ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು.›

‹ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.›

ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.

ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.

ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.

ಆಗ ಹಿರೀಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಇರುವುದನ್ನು ಕಂಡರು.

ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ.

ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.

ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.