TSK

TSK · ಮಾರ್ಕನು 13:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು.

ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”

ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.

¶ ‹“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ›‹ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ› (ಇದನ್ನು ಓದುವವನು ತಿಳಿದುಕೊಳ್ಳಲಿ)

ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.

ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.

¶ ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666.