ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
TSK
TSK · ಮಾರ್ಕನು 13:27
Treasury of Scripture Knowledge references in ಕನ್ನಡ IRV.
ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.
‹ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.›
‹ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.›
‹ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.›
¶ ‹“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;›
‹ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.›
‹ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?›
ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು
ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
¶ ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,
ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.
ಯೂದನ ಕುಲದವರಲ್ಲಿ ಮುದ್ರೆಹಾಕಿಸಿಕೊಂಡವರು ಹನ್ನೆರಡು ಸಾವಿರ, ರೂಬೇನನ ಕುಲದವರಲ್ಲಿ ಹನ್ನೆರಡು ಸಾವಿರ, ಗಾದ್ ಕುಲದವರಲ್ಲಿ ಹನ್ನೆರಡು ಸಾವಿರ,