TSK

TSK · ಮಾರ್ಕನು 13:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ‹“ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.›

ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, ‹“ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?›

¶ ‹“ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!›

‹ಅದುದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ”› ಅಂದನು.

¶ ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.

¶ ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.

ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.

¶ ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.

¶ ‹“ಎಚ್ಚರವಾಗು, ಸಾಯುವ ಹಾಗಿರುವ›‹ಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳಲ್ಲಿ ಒಂದಾದರೂ ಪರಿಪೂರ್ಣವಾದದ್ದೆಂದು ನನಗೆ ಕಂಡುಬರಲಿಲ್ಲ.›