TSK

TSK · ಮಾರ್ಕನು 13:34

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.

‹ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು.›‹ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು”› ಅಂದನು.

¶ ‹“ದೇವರ ರಾಜ್ಯವು ಹೇಗೆಂದರೆ›‹ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.›

ಅದೇನೆಂದರೆ, ‹“ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು.›

ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ.

ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.

ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ.

¶ ‹“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ,›‹ಪರಿಶುದ್ಧನೂ,›‹ಸತ್ಯವಂತನೂ,›‹ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ,›‹ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,›