TSK

TSK · ಮಾರ್ಕನು 13:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.

‹ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.›

‹ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ.›

‹ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ ಆದರೂ ನನ್ನನ್ನು ನೀವು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ಅವನನ್ನು ನೀವು ಸ್ವೀಕರಿಸುತ್ತೀರಿ.›

ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.