TSK

TSK · ಮಾರ್ಕನು 15:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು.›

‹ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.›

¶ ‹“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.›

ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.

¶ ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.