TSK

TSK · ಮಾರ್ಕನು 15:46

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.

ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.

ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನು ಇಟ್ಟಿರಲಿಲ್ಲ.

¶ ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆ ಕೊಡಲಾಗಿ, ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು.