TSK

TSK · ಮಾರ್ಕನು 4:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, ‹“ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.›

ಅದಕ್ಕೆ ಯೇಸು, ‹“ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.›

¶ ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, ‹“ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.›

ಸಭೆಯ ಹೊರಗಿರುವವರನ್ನು ತೀರ್ಪುಮಾಡುವುದಕ್ಕೆ ನನಗೇನಧಿಕಾರವಿದೆ? ಒಳಗಿನವರನ್ನು ತೀರ್ಪುಮಾಡುವವರು ನೀವೇ ಅಲ್ಲವೇ.

ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.

ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.

ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು.