¶ ಒಂದು ದಿನ ದೇವದೂತರು ಯೆಹೋವನ ಸನ್ನಿಧಿಗೆ ಬರುವಾಗ ಸೈತಾನನು (ಆಪಾದಕ ದೂತನು) ಅವರ ಜೊತೆಯಲ್ಲಿ ಬಂದನು.
TSK
TSK · ಮಾರ್ಕನು 4:15
Treasury of Scripture Knowledge references in ಕನ್ನಡ IRV.
¶ ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.
‹ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ›‹ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.›
‹ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.›
‹ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.›
ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.
ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ.
“ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು.
¶ ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.
ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.
ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.
ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.