ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ, “ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,
TSK
TSK · ಮಾರ್ಕನು 4:16
Treasury of Scripture Knowledge references in ಕನ್ನಡ IRV.
ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.
‹ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.›
ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.
ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.