TSK

TSK · ಮಾರ್ಕನು 4:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.

ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು.

ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ, ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.

“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.

¶ ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, ‹“ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.›

‹ಮತ್ತು ಆತನು “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ”› ಅಂದನು.

‹ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ”› ಎಂದು ಹೇಳಿದನು.

¶ ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, ‹“ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ.›

‹‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ.›

ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.

¶ ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು›‹ಕಿವಿಯುಳ್ಳವನು ಕೇಳಲಿ.›‹ಜಯಹೊಂದುವವನಿಗೆ›‹ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.›