¶ ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.
TSK
TSK · ಮಾರ್ಕನು 5:22
Treasury of Scripture Knowledge references in ಕನ್ನಡ IRV.
¶ ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, “ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?” ಅಂದರು.
ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.
ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರ್ಷದವಳಾದ ಅವನ ಒಬ್ಬಳೇ ಮಗಳು ಸಾಯುವ ಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನಸಮೂಹವು ಸುತ್ತಲಿನಿಂದಲೂ ಆತನನ್ನು ನೂಕಾಡುತ್ತಿತ್ತು.
ಪೇತ್ರನು ಬಂದಾಗ ಕೊರ್ನೆಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.
ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.
¶ ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.