TSK

TSK · ಮಾರ್ಕನು 6:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,

ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.

¶ ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು.

¶ ಆ ಸಮಯ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕುಳಿತುಕೊಂಡನು.

¶ ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು,

ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.

ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು.