TSK

TSK · ಮಾರ್ಕನು 6:34

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.

ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’” ಎಂಬುದಾಗಿ ಉತ್ತರಕೊಟ್ಟನು.

ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.

ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.

¶ ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, ‹“ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು”› ಎಂದು ಹೇಳಿದನು.

ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ, ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನನ್ನು ಮೆಚ್ಚಿಸಬೇಕು.

ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.