TSK

TSK · ಮಾರ್ಕನು 6:37

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?

¶ ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು.

ಆದರೆ ಯೇಸು, ‹“ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ”› ಅಂದನು.

‹“ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ.›

ಆಗ ಯೆಹೂದ್ಯರ ಪಸ್ಕದ ಹಬ್ಬವು ಹತ್ತಿರವಾಗಿತ್ತು.