ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.
TSK
TSK · ಮಾರ್ಕನು 7:34
Treasury of Scripture Knowledge references in ಕನ್ನಡ IRV.
¶ ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, ‹“ನನಗೆ ಮನಸ್ಸುಂಟು; ಶುದ್ಧನಾಗು”› ಅಂದನು.
ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು.
ಮೂರು ಗಂಟೆಗೆ ಯೇಸು, ‹“ಎಲೋಹಿ, ಎಲೋಹಿ, ಲಮಾಸಬಕ್ತಾನೀ?”› ಅಂದರೆ ‹“ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ?”› ಎಂದು ಮಹಾಧ್ವನಿಯಿಂದ ಕೂಗಿದನು.
ಯೇಸು ಅವನಿಗೆ, ‹“ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ”› ಎಂದು ಹೇಳಿದನು.
ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲಿ ವ್ಯಸನಪಟ್ಟು ನೊಂದುಕೊಂಡು,
¶ ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.
ಆತನು ಹೀಗೆ ಹೇಳಿದ ಮೇಲೆ, ‹“ಲಾಜರನೇ, ಹೊರಗೆ ಬಾ!”› ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
ಪೇತ್ರನು ಅವನಿಗೆ, “ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ” ಎಂದು ಹೇಳಿದನು. ಕೂಡಲೆ ಅವನು ಎದ್ದನು.
ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.