TSK

TSK · ಮಾರ್ಕನು 7:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.

ನೀನು ಅನ್ಯಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ; ‘ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ, ಮೋಶೆಯ ಧರ್ಮವನ್ನು ತ್ಯಜಿಸಬೇಕೆಂಬುದಾಗಿ ಬೋಧಿಸುತ್ತಿರುವೆ’ ಎಂದು ನಿನ್ನ ಕುರಿತಾಗಿ ಹೇಳಿದ್ದಾರೆ.

ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.

¶ ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.