ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.
TSK
TSK · ಮಾರ್ಕನು 9:2
Treasury of Scripture Knowledge references in ಕನ್ನಡ IRV.
ಇದಲ್ಲದೆ ಕಟ್ಟಿಗೆಯನ್ನು ಯಜ್ಞವೇದಿಯ ಮೇಲೆ ಕ್ರಮಪಡಿಸಿ, ಹೋರಿಯನ್ನು ವಧಿಸಿ ತುಂಡು ಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಸುರಿಯಿರಿ” ಎಂದು ಆಜ್ಞಾಪಿಸಿದನು.
¶ ನೀವು ಭೂಷಿತ ರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ನೀವು ಕಣ್ಣು ತುಂಬಾ ನೋಡುವಿರಿ.
¶ ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.
ಯೇಸು ಅವರಿಗೆ,‹“ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು.›
ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಹು ಬೆಚ್ಚಿಬೆರಗಾಗಿ ಮನಗುಂದಿದವನಾದನು.
¶ ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.
¶ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ.
ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,
ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.
¶ ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.