ಕೀರ್ತನೆಗಳು 68:14
TSK
ಸರ್ವಶಕ್ತನು ಅಲ್ಲಿ ರಾಜರನ್ನು ಚದುರಿಸಿದಾಗ, ಸಲ್ಮೋನಿನ ಮೇಲೆ ಹಿಮವು ಬಿದ್ದಿತು.
TSK
Treasury of Scripture Knowledge references in ಕನ್ನಡ IRV.
ಸರ್ವಶಕ್ತನು ಅಲ್ಲಿ ರಾಜರನ್ನು ಚದುರಿಸಿದಾಗ, ಸಲ್ಮೋನಿನ ಮೇಲೆ ಹಿಮವು ಬಿದ್ದಿತು.
¶ “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ.
¶ ಅದಕ್ಕೆ ಕೊರ್ನೇಲ್ಯನು; “ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು;
ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.