TSK

TSK · ಮಾರ್ಕನು 9:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.

ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, ‹“ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ?›

ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.

ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.