TSK

TSK · ಮಾರ್ಕನು 9:47

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ,

‹ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ›‹ಅಗ್ನಿ ನರಕಕ್ಕೆ ಗುರಿಯಾಗುವನು.›

‹ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.›

‹ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ›‹ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.›

ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ಆ ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ.