¶ ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.
TSK
TSK · ಮತ್ತಾಯನು 1:19
Treasury of Scripture Knowledge references in ಕನ್ನಡ IRV.
¶ “‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.
¶ ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು.
ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.
ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.
ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.