TSK

TSK · ಮತ್ತಾಯನು 1:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.

ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು.

ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿ ಅದನ್ನು ಮರೆಮಾಡಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು.

ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಅದರ ಮೇಲೆ ಪರಿಮಳ ದ್ರವ್ಯಗಳ ಧೂಪವನ್ನು ಹಾಕಿದನು.

¶ ನಾಮಾನನು ಇದನ್ನು ಕೇಳಿ ಕೋಪಗೊಂಡು, “ಇದೇನು? ಅವನು ಹೊರಗೆ ಬಂದು ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ನನ್ನ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.

‹ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.›

ನಂಬಿಕೆಯಿಂದಲೇ ಮೋಶೆಯು ದೊಡ್ಡವನಾದ ಮೇಲೆ ಫರೋಹನ ಪುತ್ರಿಯ ಮಗನೆನಿಸಿಕೊಳ್ಳುವುದು ಬೇಡವೆಂದುಕೊಂಡನು.