ಅಪರಾಧಿಗೆ ಪೆಟ್ಟಿನ ಶಿಕ್ಷೆ ತೀರ್ಮಾನವಾದರೆ ನ್ಯಾಯಾಧಿಪತಿಯು ಅವನನ್ನು ಮಲಗಿಸಿ, ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು.
TSK
TSK · ಮತ್ತಾಯನು 10:17
Treasury of Scripture Knowledge references in ಕನ್ನಡ IRV.
‹ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ›‹ಅಗ್ನಿ ನರಕಕ್ಕೆ ಗುರಿಯಾಗುವನು.›
‹ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.›
ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.
‹ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು,›
‹ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.›
‹ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.›
ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.
ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.
¶ ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.
ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಲವತ್ತು ಏಟುಗಳು ಬಿದ್ದವು.
ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು, ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು.