TSK

TSK · ಮತ್ತಾಯನು 10:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ.

¶ ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.

ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.

ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.

ಪ್ರಭುವೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು, ಬಂಗಾರದ ಪ್ರತಿಮೆಯನ್ನು ಪೂಜಿಸಲಿ.

‹ಆದರೂ ಅವರಿಗೆ ಹೆದರಬೇಡಿರಿ.›‹ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ.›

‹ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ›‹ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.›

‹ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.›

ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು.

ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?

ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.

ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು.

ಧರ್ಮಶಾಸ್ತ್ರವನ್ನು ಕೊಟ್ಟಂಥ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವುದಕ್ಕೂ ನಾಶಮಾಡುವುದಕ್ಕೂ ಸಮರ್ಥನು. ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?

‹ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ,›‹ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು›‹ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು.›‹ನೀನು ಸಾಯುವ ತನಕ›‹ನಂಬಿಗಸ್ತನಾಗಿರು, ನಾನು ನಿನಗೆ›‹ಜೀವದ ಕಿರೀಟವನ್ನು ಕೊಡುವೆನು.›