TSK

TSK · ಮತ್ತಾಯನು 10:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಜನರು ಅವನಿಗೆ, “ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲರಿಗೆ ಮಹಾ ಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು” ಎಂದು ಹೇಳಿ, ಪ್ರಾಯಶ್ಚಿತ್ತವನ್ನು ಕೊಟ್ಟು, ಅವನನ್ನು ಬಿಡಿಸಿದರು.

ಅವನು, “ಅದೋನೀಯನು ಯೋಗ್ಯತೆಯುಳ್ಳವನಾಗಿ ನಡೆಯುವುದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ. ಆದರೆ ಅವನಲ್ಲಿ ಕೆಟ್ಟತನವು ಕಂಡುಬರುವುದಾದರೆ ಅವನು ಸಾಯುವನು” ಎಂದು ಹೇಳಿ ಆಳುಗಳನ್ನು ಕಳುಹಿಸಿ ಅವನನ್ನು ಯಜ್ಞವೇದಿಯ ಬಳಿಯಿಂದ ಕರೆಯಿಸಿದನು.

‹ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ.›