TSK

TSK · ಮತ್ತಾಯನು 11:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ವಿನೋದಗಾರರ ಕೂಟದಲ್ಲಿ ಕುಳಿತುಕೊಳ್ಳಲಿಲ್ಲ, ಉಲ್ಲಾಸಪಡಲೂ ಇಲ್ಲ. ನೀನು ನನ್ನ ಮೇಲೆ ಕೈಯಿಟ್ಟಿದ್ದರಿಂದ ಒಂಟಿಗನಾಗಿ ಕುಳಿತೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ.

“ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.

¶ ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.

ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.

¶ ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.

¶ ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.