TSK

TSK · ಮತ್ತಾಯನು 11:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.

ವಿವೇಕಿಗೆ ಜ್ಞಾನವೇ ಗುರಿಯಾಗಿರುವುದು, ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವುದು.

ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು.

‹ಮನುಷ್ಯಕುಮಾರನು ಬಂದಿದ್ದಾನೆ, ಆತನು ಅನ್ನ ಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ. ನೀವು, ‘ಇಗೋ, ಈತನು ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಷ್ಠರ ಗೆಳೆಯನು’ ಅನ್ನುತ್ತೀರಿ.›

¶ ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಿದ್ದರು.

ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು.

ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ, ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನನ್ನು ಮೆಚ್ಚಿಸಬೇಕು.

ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ

“ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.