TSK

TSK · ಮತ್ತಾಯನು 11:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.

ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು.

“ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಅತಿ ಕ್ರೂರವಾಗಿ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಸುಲಿದು ಹೋಗಿದೆ. ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ, ಅವನ ಸೈನಿಕರಿಗಾಗಲಿ ತೂರಿನಿಂದ ಪ್ರತಿಫಲವೇನೂ ಸಿಕ್ಕಲಿಲ್ಲ.”

ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹಳ ಜಾಣರು ಎಂದು ಕೊಚ್ಚಿಕೊಂಡಿರುವ ತೂರ್, ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ.

‹ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು”› ಎಂದು ನಿಮಗೆ ಹೇಳುತ್ತೇನೆ ಅಂದನು.

‹ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು.›

ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.

¶ ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.

ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.