TSK

TSK · ಮತ್ತಾಯನು 11:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.

ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ, ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ, ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು.

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನೂ ನಿನ್ನ ಕುಮಾರ್ತೆಯರೂ ನಡೆದಂತೆ ಸೊದೋಮೆಂಬ ನಿನ್ನ ತಂಗಿಯಾಗಲಿ, ಆಕೆಯ ಕುಮಾರ್ತೆಯರಾಗಲಿ ನಡೆಯಲಿಲ್ಲ.

ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.

ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.

‹ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು›‹ಪೇತ್ರನು, ಈ›‹ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.›

¶ ಅದಕ್ಕೆ ಯೇಸು ಅವರಿಗೆ, ‹“‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ.›

‹ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,›

ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ.

ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.