TSK

TSK · ಮತ್ತಾಯನು 12:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

¶ ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.

¶ ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.

¶ ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ.

¶ ಆ ಮೇಲೆ ಆತನು ಯೊರ್ದನ್ ಹೊಳೆಯನ್ನು ದಾಟಿ, ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಹೋಗಿ ಅಲ್ಲಿ ಉಳಿದು ಕೊಂಡನು.

ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.