¶ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
TSK
TSK · ಮತ್ತಾಯನು 12:28
Treasury of Scripture Knowledge references in ಕನ್ನಡ IRV.
‹ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.›
‹ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು?› ಎಂದು ಕೇಳಿದ್ದಕ್ಕೆ ಅವರು, ‘ಮೊಲನೆಯವನೇ’” ಅಂದರು. ಆಗ ಯೇಸು ಅವರಿಗೆ, ‹ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
‹“ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”›
¶ ‹“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;›
ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.
‹ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ.›
¶ ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, ‹“ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ.›
ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.
ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.