ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.
TSK
TSK · ಮತ್ತಾಯನು 12:44
Treasury of Scripture Knowledge references in ಕನ್ನಡ IRV.
‹ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲುಕೊಳ್ಳುವುದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.›
¶ ‹“ಒಬ್ಬ ಬಲಿಷ್ಠನು ಸರ್ವಾಯುಧಗಳನ್ನು ಧರಿಸಿಕೊಂಡು ತನ್ನ ಮನೆಯನ್ನು ಕಾಪಾಡಿಕೊಂಡಿರುವಾಗ ಅವನ ವಸ್ತುಗಳು ಭದ್ರವಾಗಿಯೇ ಇರುವವು;›
ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.
ಅವನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, ‹“ನೀನು ಮಾಡುವುದನ್ನು ಬೇಗನೇ ಮಾಡು”› ಎಂದು ಹೇಳಿದನು.
ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,
ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.
ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ.
ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.
ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.
ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.