TSK

TSK · ಮತ್ತಾಯನು 12:46

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.

“ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು.

¶ ‹“ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.›

ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.

¶ ಆ ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳಿಗೆ ಅದರ ತಂದೆತಾಯಿಗಳು ಆಶ್ಚರ್ಯಪಡುತ್ತಿರಲು,

ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.

¶ ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.

ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು.

ಆದುದರಿಂದ ಆತನ ಸಹೋದರರು ಆತನಿಗೆ “ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು.

¶ ಆದರೆ ಆತನ ಸಹೋದರರು ಹೋದ ಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ, ರಹಸ್ಯವಾಗಿ ಹೋದನು.

ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.

ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.