‹ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.›
TSK
TSK · ಮತ್ತಾಯನು 13:12
Treasury of Scripture Knowledge references in ಕನ್ನಡ IRV.
¶ ಮತ್ತು ಆತನು ಅವರಿಗೆ; ‹“ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ.›‹ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು.›
‹ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು”› ಅಂದನು.
‹ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ”› ಎಂದು ಉತ್ತರಕೊಟ್ಟನು.
‹ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು.›
‹ಹತ್ತಿರ ನಿಂತಿದ್ದವರಿಗೆ, ‘ಆ ನಾಣ್ಯವನ್ನು ಅವನಿಂದ ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳುಳ್ಳವನಿಗೆ ಕೊಡಿರಿ’ ಎಂದು ಹೇಳಿದನು.›
‹ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ›‹ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ›‹ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.›