ಮಧ್ಯರಾತ್ರಿಯಲ್ಲಿಯೇ ಇವಳೆದ್ದು ನಿಮ್ಮ ಸೇವಕಳಾದ ನಾನು ಗಾಢನಿದ್ರೆಯಲ್ಲಿದ್ದಾಗ ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಪಕ್ಕದಲ್ಲಿಟ್ಟುಕೊಂಡಳು. ಸತ್ತು ಹೋದ ತನ್ನ ಮಗುವನ್ನು ನನ್ನ ಪಕ್ಕದಲ್ಲಿರಿಸಿದಳು.
TSK
TSK · ಮತ್ತಾಯನು 13:25
Treasury of Scripture Knowledge references in ಕನ್ನಡ IRV.
‹ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು.›
ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.
ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.
ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.
¶ ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.