ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.
TSK
TSK · ಮತ್ತಾಯನು 13:32
Treasury of Scripture Knowledge references in ಕನ್ನಡ IRV.
ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.
ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಸಮಸ್ತ ಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳಿಗೆ ಜನ್ಮ ಕೊಟ್ಟವು. ಮಹಾಜನಾಂಗಗಳೆಲ್ಲಾ ಅದರ ನೆರಳಿನಲ್ಲಿ ವಾಸಮಾಡಿದವು.
¶ “ನೀನು ನೋಡುತ್ತಿರಲಾಗಿ ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು, ಸಿಡಿದು ಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನ ಪಾದಗಳಿಗೆ ಬಡಿದು, ಚೂರುಚೂರು ಮಾಡಿತು.
ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಆದ್ದರಿಂದ ಎಲ್ಲಕ್ಕೂ ಆಹಾರ, ನೆರಳೂ, ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶ ಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.
¶ ಆಗ ದೂತನು “ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?
ಅದು ಯೆಹೋವನಿಗೆ ತಿಳಿದಿರುವುದು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವುದು.
¶ ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.
¶ ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.