TSK

TSK · ಮತ್ತಾಯನು 13:37

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಗೋದಿಯ ಕಾಳನ್ನು ನುಚ್ಚು ಮಾಡುವನೋ? ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ.

¶ ‹“ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ;›‹ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ.›

‹ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, ‘ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?’ ಎಂದು ಕೇಳಿದರು.›

¶ ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, ‹“ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ”› ಎಂದು ತನ್ನ ಶಿಷ್ಯರನ್ನು ಕೇಳಿದನು.

‹ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”›

‹ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ”› ಅಂದನು.

¶ ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.

ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.