TSK

TSK · ಮತ್ತಾಯನು 14:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೇ” ಅಂದರು.

ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, ‹“ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ”› ಅಂದನು.

ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು.

ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.

¶ ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ ‹“ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ”› ಎಂದನು.

ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ, ಮುರಿದು ಶಿಷ್ಯರ ಕೈಗೆ ಕೊಟ್ಟು, ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು.

ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ,

ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.

ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.

ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?

‹“ಇದು›‹ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ›‹ಹೀಗೆ ಮಾಡಿರಿ”› ಅಂದನು.

ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ.