ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
TSK
TSK · ಮತ್ತಾಯನು 14:27
Treasury of Scripture Knowledge references in ಕನ್ನಡ IRV.
ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?
ಆದರೆ ಯೇಸು ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, ‹“ಏಳಿರಿ ಹೆದರಬೇಡಿರಿ”› ಅಂದನು.
ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.
ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.
ಆದರೆ ಯೇಸು ಅವರಿಗೆ, ‹“ಭಯಪಡಬೇಡಿರಿ, ನಾನೇ!”› ಎಂದನು.
‹ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.›‹ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ”› ಎಂದು ಹೇಳಿದನು.
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, ‹“ಹೆದರಬೇಡ,›‹ನಾನು ಮೊದಲನೆಯವನೂ, ಕಡೆಯವನೂ,›