ಮತ್ತಾಯನು 11:9
TSK
‹ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ.›
TSK
Treasury of Scripture Knowledge references in ಕನ್ನಡ IRV.
‹ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ.›
‹ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ.›
‹ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?”› ಉತ್ತರಕೊಡಿರಿ ಅಂದನು.
ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,
ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.