TSK

TSK · ಮತ್ತಾಯನು 16:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.

‹ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು”› ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, ‹“ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು”› ಅಂದನು.

‹ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ.›

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, ‹“ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು.›

¶ ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು.

¶ ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು, ‹“ಜನರು ನನ್ನನ್ನು ಯಾರೆಂದು ಹೇಳುತ್ತಾರೆ?”› ಎಂದು ತನ್ನ ಶಿಷ್ಯರನ್ನು ಕೇಳಿದನು.

‹ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ›‹ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು”› ಎಂದು ಹೇಳಿದನು.

ಯೇಸು ‹“ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ.›‹ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ›‹ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ”› ಎಂದು ಹೇಳಿದನು.

‹ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ.›

“ಅಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ” ಎಂದು ಹೇಳಿದನು.

¶ ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,